March 31, 2026

ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕ್ರಾಂತಿ ಆದಾಗ ಮಾತ್ರ ಕ್ಷೇತ್ರ ಅಭಿವೃದ್ಧಿಯಾಗಲು ಸಾಧ್ಯ. ಈ ಆಶಯದೊಂದಿಗೆ, ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೂಮಿಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ತಿಳಿಸಿದರು…

ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕ್ರಾಂತಿ ಆದಾಗ ಮಾತ್ರ ಕ್ಷೇತ್ರ ಅಭಿವೃದ್ಧಿಯಾಗಲು ಸಾಧ್ಯ. ಈ ಆಶಯದೊಂದಿಗೆ, ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೂಮಿಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ತಿಳಿಸಿದರು…

ಚಿಟ್ಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮ ಹೋರವಲಯಲ್ಲಿರುವ ೫ ಎಕರೆ ವಿಸ್ತೀರ್ಣದ ಜಾಗದಲ್ಲಿ ೨೦೨೪-೨೫ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಡಿ ಕ್ರೈಜ್ ಗುತ್ತಿಗೆದಾರ ಅವರಿಗೆ ಮಂಜೂರಾದ ೧೬.೭೨ ಕೋಟಿ ರೂಪಾಯಿ ವೆಚ್ಚದ ಸುಸಜ್ಜಿತ ಹೈಟೆಕ್ ನೂತನ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೇರವೆರಿಸಿ ಮಾತನಾಡಿದ ಅವರು.

ಇದು ವಿದ್ಯಾರ್ಥಿನಿಯರಿಗಾಗಿ ಇರುವ ಸೈನಿಕ ಮಾದರಿಯ ವಸತಿ ಶಾಲೆಯಾಗಿದ್ದು, ಸಿಬಿಎಸ್‌ಇ ಪಠ್ಯಕ್ರಮವನ್ನು ಅನುಸರಿಸುತ್ತದೆ. ಇದರಿಂದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕ್ಷೆತ್ರದ ನೂರಾರು ಹಿಂದುಳಿದ ವರ್ಗದ ಬಡವರು ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅತ್ಯುತ್ತಮವಾದ ಶೈಕ್ಷಣಿಕ ವಾತಾವರಣದಲ್ಲಿ ಗುಣಮಟ್ಟದ. ಉಚಿತ ಶಿಕ್ಷಣ ಹಾಗೂ ವಸತಿ ಸೌಕರ್ಯ ದೊರೆಯಲಿದೆ. ಈ ವಸತಿ ಶಾಲೆ ಕಟ್ಟಡ ನಿರ್ಮಿಸಲಾಗುತ್ತಿದ್ದು, ಇದು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರಲಿದೆ.

ಕ್ಷೇತ್ರದÀ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಶಿಷ್ಟಾಚಾರ ಉಲ್ಲಂಘನೆ ಎಲ್ಲೂ ಆಗಿಲ್ಲ. ಅಧಿಕಾರಿಗಳಿಗೆ ಒಂದು ವಾರ ಮುಂಚೆ ಪತ್ರ ಮೂಲಕ ಮಾಹಿತಿ ನೀಡಲಾಗಿದೆ. ಕಾರಣಾಂತರದಿAದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿ ಕಾಣಿಸುತ್ತದೆ. ಈ ಕುರಿತು ಮೇಲ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರಿಂದ ಶಾಸಕರ ವಾಹನ ತಡೆ.

ಕಾರ್ಯಕ್ರಮದಲ್ಲಿ ಸಂಬAಧಿತ ಇಲಾಖೆ ಅಧಿಕಾರಿಯಾಗಲಿ, ಜನಪ್ರತಿನಿಧಿಗಳ ಗಮನಕ್ಕೆ ತರದೆ ಗುದ್ದಲಿ ಪೂಜೆ ಮಾಡಲಾಗುತ್ತಿದೆ. ಶಾಸಕ ಡಾ. ಸಿದ್ದು ಪಾಟೀಲ್ ಅವರು ಶಿಷ್ಠಾಚಾರ ಉಲ್ಲಂಘನೆ ಮಾಡುತ್ತಿದ್ದಾರೆ. ಎಂದು ಕಾರ್ಯಕ್ರಮ ತಡೆಯಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾದಾಗ ಡಿವಾಯ್‌ಎಸ್‌ಪಿ ಮಡೋಳಪ್ಪ ಮಾರ್ಗದರ್ಶನದಲ್ಲಿ ಸಿಪಿಐ ಸಂತೋಷ ತಟಪಳ್ಳಿ ನೆತೃತ್ವದಲ್ಲಿ ಪ್ರತಿಭಟನಾಕಾರರನ್ನು ತಡೆದರು. ಬಳಿಕ ಶಾಸಕ ವಾಹನ ಅಡ್ಡಗಟ್ಟಿ ಇತರಹ ಕಾರ್ಯಕ್ರಮ ಮಾಡುವುದು ಸರಿ ಅಲ್ಲ ಎಲ್ಲರನ್ನು ಅಹ್ವಾನ ಮಾಡುವಂತೆ ಆಗ್ರಹಿಸಿದರು.

BAJARANG TIWARI

District Reporter

Leave a Reply

Your email address will not be published. Required fields are marked *

INDIAN PRESS UNION

Indian Press Union (IPU) A National Platform for Journalists and Media Professionals.

© 2026 All Rights Reserved IPU MEDIA ASSOCIATION